ವನಮಹೋತ್ಸವ ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ನಮ್ಮ ಭಾಗದ ಶಾಸಕರಾದ ವಿನಯ್ ಕುಲಕರ್ಣಿ ಇವರ ಧರ್ಮಪತ್ನಿ ಶ್ರೀಮತಿ ಶಿವಲೀಲಾ ವಿನಯ್ ಕುಲಕರ್ಣಿ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲೆಯ ಪ್ರಧಾನ ಗುರುಗಳಾದ ಐ ಎಂ ಪೀರಜಾದೆ ಹಾಗೂ ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ್ ವೀರಾಪುರ್ ಹಾಗೂ ಕಾರ್ಯದರ್ಶಿಗಳಾದ ಡಾ!! ಉಮೇಶ್ ಹಳ್ಳಿಕೇರಿ ಹಾಗೂ ಡಾ!!ಪ್ರಕಾಶ್ ಪವಾಡ್ ಶೆಟ್ಟಿ ಉಪಸ್ಥಿತರಿದ್ದರು. ಶ್ರೀಮತಿ ಎಂ ಎಸ್ ಹಸಬಿಮಠ ಕಾರ್ಯಕ್ರಮ ನಿರೂಪಿಸಿದರು ಶ್ರೀ ಎಂ.ಡಿ. ಮಾನೆ ಸ್ವಾಗತಿಸಿದರು . ಹಾಗೂ ಎಲ್ಲ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





