Breaking News

ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಆಯ್ಕೆ

ಹುಬ್ಬಳ್ಳಿ: ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಶಂಕರಗೌಡ ಹೊನ್ನಪ್ಪಗೌಡ್ರ ಮತ್ತು ಉಪಾಧ್ಯಕ್ಷರಾಗಿ ಸುಜಾತ ರಂಗಣ್ಣವರ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಭಾರಿ ಮುಖ್ಯಗುರುಗಳಾದ ಎಮ್.ಎಸ್.ಪಟ್ಟವರ್ಧನ ತಿಳಿಸಿದ್ದಾರೆ.

ಶಾಲೆಯಲ್ಲಿಂದು ಎಸ್ ಡಿಎಂಸಿ ರಚನೆ ಸಭೆ ನಡೆಯಿತು. ಎಲ್ಲರ ಸಹಮತದೊಂದಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಎಸ್ಟಿಎಂಸಿ ಅಧ್ಯಕ್ಷ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಇದೇ ವೇಳೆ ಶಾಲೆಯಿಂದ ವರ್ಗಾವಣೆಗೊಂಡ ಕೆ.ಎಮ್.ಹಗೇದ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಗ್ರಾಮದ ಹಿರಿಯರು, ಮುಖಂಡರು, ಪಾಲಕರು, ಪೋಷಕರು, ಶಿಕ್ಷಕರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *