ಧಾರವಾಡ : ರಾಹುಲ್ ಗಾಂಧಿ ಅವರನ್ನು ಸಂಸದ
ಸ್ಥಾನದಿಂದ ಅನರ್ಹ ಮಾಡುವ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಧಾರವಾಡದಲ್ಲಿ ಮೌನ ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಗಾಂಧಿ ಪ್ರತಿಮೆ ಎದುರು ಮೌನ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ರಾಬರ್ಟ್ ದದ್ದಾಪುರಿ, ಕಾಂಗ್ರೆಸ್ ಮುಖಂಡ ದೀಪಕ ಚಿಂಚೋರೆ, ನಾಗರಾಜ ಗುರಿಕಾರ, ಆನಂದ ಜಾಧವ, ವಸಂತ ಅರ್ಕಾಚಾರಿ ಸೇರಿದಂತೆ ಹಲವರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





