ಹುಬ್ಬಳ್ಳಿ: ಪೊಲೀಸ್ ಪೇದೆಯೋರ್ವ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಂಡಿಗೇರಿಯ ದೊಡ್ಡಮನಿ ಕಾಲೋನಿಯಲ್ಲಿ ನಡೆದಿದೆ
ಸಂಗೊಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ರುದ್ರಾಪೂರ್ (26) ಎಂಬಾತರೇ ತಾವು ವಾಸವಿರುವ ಸ್ಥಳದಲ್ಲಿಯೇ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಈ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





