Breaking News

ಜೈನ ಮುನಿಗಳ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಮಾಜ ಸೇವಕ ಮಾಬುಸಾಬ ಅರಗುಪ್ಪಿ ಆಗ್ರಹ

ನವಲಗುಂದ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡನೀಯವಾಗಿದ್ದು ಹಂತಕರನ್ನು ಗಲ್ಲಿಗೇರಿಸಬೇಕೆಂದು ಸಮಾಜ ಸೇವಕ ಮಾಬುಸಾಬ ಯರಗುಪ್ಪಿ ಆಗ್ರಹ ಮಾಡಿದರು.

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅಭಿಮಾನಿಗಳ ಸಂಘದಿಂದ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು ಜೈನ ಮುನಿಗಳು ಅಹಿಂಸಾವಾದಿಗಳು, ತಮಗೆ ನೋವು ಕೊಟ್ಟವರಿಗೂ ಒಳ್ಳೆಯದಾಗಲಿ ಎನ್ನುವಂತಹ ಉದಾರ ಮನೋಭಾವ ಹೊಂದಿದವರು ಅಂತಹ ಗುರುಗಳ ಹತ್ಯೆ ಮಾಡಿದ ಕೊಲೆಗಡುಕರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದು ಪೂಜಾರ, ಮಲ್ಲೇಶ ಉಪ್ಪಾರ, ಇರ್ಫಾನ ಶಿರಸಂಗಿ, ಶಾನೂರ ಅಣ್ಣಿಗೇರಿ, ಮುನ್ನಾ ಕಲ್ಲಕುಟ್ರಿ, ಇರ್ಫಾನ ನಾಶಿಪುಡಿ, ಆಶೀಪ ನಾಗನೂರ, ಆಜಾದ ನಾಶಿಪುಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *