Breaking News

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆರ್ ಅಶೋಕ್ ವಾಗ್ದಾಳಿ.

ಬೆಂಗಳೂರು: ‘ಒಂದು ಕೈಯ್ಯಲ್ಲಿ ಐದು ಭಾಗ್ಯಗಳನ್ನು ಕೊಟ್ಟು, ಎರಡು ಕೈಯಲ್ಲಿ ಕಿತ್ತುಕೊಂಡರು’ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಶುಕ್ರವಾರ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಸ್ತಾಪಿಸಿ, ‘ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಹಾಲು ಮಾಡೋದಕ್ಕೆ ಹೊರಟಿರುವ ಕಾಂಗ್ರೆಸ್ ಸರಕಾರ, ಜನರ ಮೂಗಿಗೆ ಸವರುವ ಕೆಲಸ ಮಾಡಿದೆ’ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹಾಲಿನ ದರ 5 ರೂ.ಯಿಂದ 6ರೂ.ಗೆ ಹೆಚ್ಚಿಸುವ ನಿರ್ಧಾರ ಇದೆ. ಒಂದು ಕೈಯ್ಯಲ್ಲಿ ಕೊಟ್ಟು, ಎರಡು ಕೈಯಲ್ಲಿ ಬಾಚಿಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಬೆಲೆ ಏರಿಕೆಯಿಂದ ಜನ ಪರಿತಪಿಸಬೇಕಾಗಿದೆ, ಎಲ್ಲ ದರ ಹೆಚ್ಚಾದರೇ ಜನ ಪಾಪ ಹೇಗೆ ಬದುಕಬೇಕು?’ ಎಂದು ಪ್ರಶ್ನಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *