Breaking News

ದಶಪಥ ಹೆದ್ದಾರಿಯಲ್ಲಿ ಸರಣಿ ಅಪಘಾತ:ನಾಲ್ಕು ವಾಹನಗಳು ಜಖಂ.

ರಾಮನಗರ: ಬೆಂಗಳೂರು-ದಶಪಥ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಸರಣಿ ಅಪಘಾತ ನಡೆದು ನಾಲ್ಕು ವಾಹನಗಳು ಜಖಂಗೊಂಡಿವೆ.

ಬಿಡದಿಯ ನೆಲ್ಲಿಗುಡ್ಡೆ ಕೆರೆಯ ಸಮೀಪ ದಶಪಥ ಹೆದ್ದಾರಿಯಲ್ಲಿ ಲಾರಿ, ಬಸ್ ಹಾಗೂ ಎರಡು ಕಾರು ನಡುವೆ ಅಪಘಾತ ನಡೆದಿದೆ. ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಈ ನಾಲ್ಕು ವಾಹನಗಳ ನಡುವೆ ಅಪಘಾತ ನಡೆದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಂದಗತಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಮೊದಲು ಐರಾವತ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ಹಿಂಬಂದಿ ಬರುತ್ತಿದ್ದ ಎರಡು ಕಾರುಗಳು ಸಹ ಬಸ್ಸಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ

ಸರಣಿ ಅಪಘಾತದಿಂದ ನಾಲ್ಕು ವಾಹನಗಳು ಜಖಂಗೊಂಡಿದ್ದು, ಸ್ಥಳಕ್ಕೆ ಬಿಡದಿ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಬಳಿಕ ಜಖಂಗೊಂಡ ವಾಹನಗಳನ್ನ ತೆರವು ಮಾಡಿದ್ದಾರೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *