Breaking News

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಐದು ಲಕ್ಷ ಸಹಿ ಅಭಿಯಾನ: ಪ್ರಮೋದ ಮುತಾಲಿಕ

ಧಾರವಾಡ : ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಐದು ಲಕ್ಷ ಸಹಿ ಅಭಿಯಾನವನ್ನು ಶ್ರೀ ರಾಮ ಸೇನೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಿದೆ. ಜನರಿಗೆ ಈ ಕಾಯ್ದೆಯಿಂದ ಸಮಾನ ಅವಕಾಶಗಳು ಜನರಿಗೆ ದೊರೆಯುತ್ತದೆ ಎಂದು ತಿಳಿಸಿದರು.

ಪ್ರತಿಯೊಂದು ಜಿಲ್ಲೆಯಲ್ಲೂ ಈ ಸಹಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಚಿತ್ರ ನಟರು, ರಂಗಭೂಮಿ ಕಲಾವಿದರು, ವಕೀಲರು, ಡಾಕ್ಟರ್ ಗಳು ಹಾಗೂ ವ್ಯಾಪಾರಸ್ಥರು ಈ ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ ಎಂದು. ದೇಶದ ಐಕ್ಯತೆ ಮತ್ತು ಭದ್ರತೆಯ ದೃಷ್ಟಿಯಿಂದ ಏಕರೂಪ ನಾಗರಿಕ ಸಂಹಿತೆಯನ್ನು ಸರಕಾರ ಅನುಷ್ಠಾನ ಗೊಳಿಸಬೇಕು ಎಂದು ಮುತಾಲಿಕ
ಆಗ್ರಹಿಸಿದರು.

ಶ್ರೀರಾಮ ಸೇನಾದ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಮುಖಂಡರಾದ ಅಣ್ಣಪ್ಪ ದಿವಟಗಿ, ಪಾಂಡು ಯಮೋಜಿ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *