Breaking News

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಹದಾಯಿ ವಿಳಂಬಕ್ಕೆ ಕಾರಣ

ಹುಬ್ಬಳ್ಳಿ: ಮಹದಾಯಿ ಹೋರಾಟ ಏಳು ವರ್ಷ ಪೂರೈಸಿ ಎಂಟು ವರ್ಷಕ್ಕೆ ಕಾಲಿಟ್ಟಿದೆ. ಆದರೂ ಕೂಡ ಮಹದಾಯಿ ಕನಸು ಕನಸಾಗಿಯೇ ಉಳಿದಿದೆ. ಈ ವಿಳಂಬಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ಕಾರಣ ಎಂದು ಮಹದಾಯಿ ಹೋರಾಟಗಾರ ವೀರೇಶ ಸೊರಬದಮಠ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರತಿಯೊಂದು ಸರ್ಕಾರವೂ ಕೂಡ ಹರಿಕೆ ಉತ್ತರವನ್ನು ನೀಡುವ ಮೂಲಕ ತಮ್ಮ ರಾಜಕೀಯ ಬೆಳೆಯನ್ನು ಬೇಯಿಸಿಕೊಳ್ಳುವ ಕೆಲಸವನ್ನು ಮಾಡುತ್ತಿವೆ. ಈ ಭಾಗದ ಬಹು ನಿರೀಕ್ಷಿತ ಯೋಜನೆ ಕಳಸಾ ಬಂಡೂರಿ ಮಹದಾಯಿ ಯೋಜನೆ ವಿಳಂಬವಾಗಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರೇ ನೇರವಾದ ಹೊಣೆಗಾರರಾಗಿದ್ದಾರೆ ಎಂದರು.

ಇನ್ನೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾಕಷ್ಟು ಭರವಸೆ ಕೊಟ್ಟಿದ್ದರು. ಆದರೆ ಯಾವುದೇ ರೀತಿಯಲ್ಲಿ ಭರವಸೆ ಈಡೇರಿಸದೇ ನೆಪ ಮಾತ್ರಕ್ಕೆ ಮಹದಾಯಿ ಬಗ್ಗೆ ಚಿಂತನೆ ನಡೆಸಿ ಕೈತೊಳೆದುಕೊಂಡಿರುವುದು ವಿಪರ್ಯಾಸಕರ ಸಂಗತಿಯಾಗಿದೆ ಎಂದು ಅವರು ಹೇಳಿದರು.

ಇನ್ನೂ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಮಹದಾಯಿ ಬಗ್ಗೆ ಇನ್ನೂ ಕೆಲವು ದಿನಗಳಲ್ಲಿ ಕಿರು ಹೊತ್ತಿಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಸೂಚನೆ ನೀಡಿದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *