ಮೈಸೂರು:ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಯಾವ ವಿಧಾನಸಭಾ ಕ್ಷೇತ್ರಗಳಲ್ಲಿ ಸಸ್ಯೋದ್ಯಾನ (ಟ್ರೀ ಪಾರ್ಕ್) ಇಲ್ಲವೋ ಅಲ್ಲಿ ಸಾಲುಮರದ ತಿಮ್ಮಕ್ಕ ಟ್ರೀಪಾರ್ಕ್ಗಳನ್ನು ನಿರ್ಮಿಸುವಂತೆ ರಾಜ್ಯ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೈಸೂರಿನ ಅರಣ್ಯ ಭವನದಲ್ಲಿ ಭಾನುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯ ತಡೆಗೆ ವೃಕ್ಷ ಸಂಪತ್ತಿನ ಹೆಚ್ಚಳ ಅನಿವಾರ್ಯ ಎಂದರು. ರಾಜ್ಯ ಸರ್ಕಾರ ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ನೆಟ್ಟು ಪೋಷಿಸಲು ತೀರ್ಮಾನಿಸಿದೆ ಎಂದರು.
ದಿನಗೂಲಿ ನೌಕರರಿಗೆ ಅದರಲ್ಲೂ ಹೊರಗುತ್ತಿಗೆ ನೌಕರರಿಗೆ ವೇತನ ವಿಳಂಬವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಹೊರಗುತ್ತಿಗೆ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಂಡು ಬಡ ನೌಕರರಿಗೆ ಸಕಾಲದಲ್ಲಿ ಸಂಬಳ ಕೈ ಸೇರುವಂತೆ ಕ್ರಮ ವಹಿಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





