Breaking News

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ.

ಬೆಂಗಳೂರು:ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನವಾಗಿದ್ದು, ಮೃತದೇಹವನ್ನು ಇಂದಿರಾ ನಗರದಲ್ಲಿರುವ ಅವರ ಸ್ನೇಹಿತ ಹಾಗು ಕೇರಳ ಕಾಂಗ್ರೆಸ್‌ ಮುಖಂಡರಾಗಿದ್ದ ದಿವಂಗತ ಟಿ.ಜಾನ್ ಮನೆಗೆ ಕೊಂಡೊಯ್ಯಲಾಗಿದೆ. ಇಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಪಕ್ಷದ ಹಿರಿಯ ನಾಯಕನ ಮೃತದೇಹವನ್ನು ಹುಟ್ಟೂರಿಗೆ ರವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನ ವ್ಯವಸ್ಥೆ ಮಾಡಿದ್ದಾರೆ. ಬೆಳಿಗ್ಗೆ 11 ಗಂಟೆಯ ನಂತರ ಹೆಚ್ಎಎಲ್ ಏರ್​ಪೋರ್ಟ್‌ನಿಂದ ತಿರುವನಂತಪುರಂಗೆ ಮೃತದೇಹ ರವಾನೆಯಾಗಲಿದೆ.ಇಂದಿರಾನಗರದ ಜಾನ್ ನಿವಾಸದ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ನಿವಾಸದ ಮುಂದಿನ ರಸ್ತೆಯಲ್ಲಿ‌ ತಾತ್ಕಾಲಿಕವಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಪೂರ್ವ ವಿಭಾಗದ ಡಿಸಿಪಿ ಡಾ.ಭೀಮಾಶಂಕರ ಗುಳೇದ್ ಭದ್ರತೆಯ ನೇತೃತ್ವ ವಹಿಸಿದ್ದಾರೆ

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *