ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘದ 134 ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಜುಲೈ 20 ರಿಂದ 24 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ತಿಳಿಸಿದರು.
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕನ್ನಡಿಗರ ಹಿರಿಮೆ ಹೆಚ್ಚಿಸಿದ ಕರ್ನಾಟಕ ವಿದ್ಯಾವರ್ಧಕ ಸಂಘದ ಧಾರವಾಡ 134 ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಉದ್ಘಾಟನೆ ಮಾಡಲಿದ್ದಾರೆ.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ನಾಲ್ಕು ದಿನಗಳ ಕಾಲ ಕನ್ನಡ ನಾಡು, ನುಡಿ ಕುರಿತು ಚಿಂತನ ಮಂಥನ ನಡೆಯಲಿದ್ದು. ಅದರಂತೆ ಕನ್ನಡ ಪುಸ್ತಕಗಳ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ, ಚಿತ್ರ ಕಲಾ ಪ್ರದರ್ಶನ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಸದಸ್ಯರಾದ ಮಾಲತಿ ಪಟ್ಟಣಶೆಟ್ಟಿ, ಶಿವಾನಂದ ಭಾವಿಕಟ್ಟಿ ಸೇರಿದಂತೆ ಹಲವರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





