ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಗಂಭೀರ ಆರೋಪದಡಿ ಐವರು ಶಂಕಿತ ಉಗ್ರರನ್ನು ನಗರ ಪೊಲೀಸರು ಇಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ನಿಲ್ದಾಣ ಸೇರಿದಂತೆ ನಗರದ ಜನಸಂದಣಿ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸಲು ಹೊಂಚು ಹಾಕುತ್ತಿದ್ದ ಆರೋಪದಡಿ ಸುಹೇಲ್, ಉಮರ್, ಜಾಹಿದ್, ಮುದಾಸಿರ್ ಹಾಗೂ ಫೈಜರ್ ಎಂಬವರನ್ನು ಬಂಧಿಸಲಾಗಿದೆ. ಇವರಿಂದ 7 ಕಂಟ್ರಿಮೇಡ್ ಪಿಸ್ತೂಲ್ಗಳು, 45 ಜೀವಂತ ಗುಂಡುಗಳು, ವಾಕಿಟಾಕಿ ಸೆಟ್ಸ್, ಒಂದು ಡ್ರ್ಯಾಗರ್ ಹಾಗೂ 12 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಪ್ರಕರಣದಲ್ಲಿ ಶಾಮೀಲಾಗಿರುವ 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟದ ಶಂಕಿತ ಉಗ್ರ ಟಿ. ನಜೀರ್ ನ್ಯಾಯಾಂಗ ಬಂಧನಲ್ಲಿದ್ದಾನೆ. ಎರಡನೇ ಆರೋಪಿ ಜುನೈದ್ ಸದ್ಯ ತಲೆಮರೆಸಿಕೊಂಡಿದ್ದಾನೆ. ಹೆಚ್ಚಿನ ವಿಚಾರಣೆಗಾಗಿ ಬಂಧಿತ ಐವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





