Breaking News

ತುರ್ತು ಮಾಧ್ಯಮಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಬಿ. ದಯಾನಂದ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರುನಗರದಲ್ಲಿ ಭಾರಿ ಸ್ಫೋಟ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಇಂದು ಬೆಳಗ್ಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ದೇಶದ್ರೋಹ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು. ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತುರ್ತು ಮಾಧ್ಯಮಗೋಷ್ಠಿ ನಡೆಸಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಯೋಜನೆ ರೂಪಿಸಿದ್ದ ಐವರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಸಿಸಿಬಿ ಪೊಲೀಸರ ತಂಡ ಯಶಸ್ವಿಯಾಗಿದೆ. ಹೆಬ್ಬಾಳ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಶಂಕಿತರ ಮನೆಗಳ ಮೇಲೆ‌ ದಾಳಿ ನಡೆಸಲಾಗಿತ್ತು. ಬಂಧಿತರಿಂದ ಏಳು ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿ ಸೇರಿದಂತೆ ಮೊಬೈಲ್​ ಫೋನ್​ಗಳನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆಯಲ್ಲಿ ಐವರೂ ಸಹ ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿರುವುದಾಗಿ ಒಪ್ಪಿಕೊಂಡಿದ್ದಾರೆ.”

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *