ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,
ಈ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರ ಆಗಿದೆ. ರೈತರು ಎರಡು ಬಾರಿ ಬಿತ್ತನೆ ಮಾಡಿದರು ಬೆಳೆ ಬರದೇ ರೈತರು ಸಂಕಷ್ಟಕ್ಕೆ ಸಿಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. 2013 ರಿಂದ 18ರ ವರೆಗೆ ಅತಿ ಹೆಚ್ಚು ರೈತರು ಸುಮಾರು 4000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ ಎಂದು ಹೇಳಿದರು.
ನಾವು ನಮ್ಮ ಬಜೆಟ್ ನಲ್ಲಿ ಡಿಗ್ರಿವರೆಗೆ ಉಚಿತ ವಿದ್ಯಾಭ್ಯಾಸ ನಿಡುವುದಾಗಿ ಹೇಳಿದ್ದೇವು. ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದೇವು ಇವರು ಅದನ್ನು ಕೈ ಬಿಟ್ಟಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ. ಪೊಲಿಸ್ ಠಾಣೆಯಲ್ಲಿ ಮಾಮೂಲು ಕೇಳುವ ಕೆಲಸ ಶುರುವಾಗಿದೆ. ವಿದ್ಯಾರ್ಥಿಗಳು, ರೈತರು, ಸರ್ಕಾರಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಸಾಮಾನ್ಯ ಜನರ ಬದುಕು ಅಸ್ಥಿರಗೊಳಿಸಿದ್ದಾರೆ. ಇವರು ಮಂಡಿಸಿರುವುದು ಜನ ವಿರೋಧಿ ಬಜೆಟ್ ಇವರು ಗ್ಯಾರೆಂಟಿ ಗಳಿಗೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಇವರ ಅವಧಿಯಲ್ಲಿ ಅತಿ ಹೆಚ್ಚು ಸಾಲ ಮಾಡಿದ್ದಾರೆ. ನಿಜಲಿಂಗಪ್ಪ ರಿಂದ ಹಿಡಿದು ಜಗದೀಶದ ಶೆಟ್ಟವರೆಗೆ ಒಂದು ಲಕ್ಷ ಕೋಟಿ ಸಾಲವಾಗಿತ್ತು. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಒಂದು ಲಕ್ಷ ಮೂವತ್ತು ಸಾವಿರ ಕೋಟಿ ಸಾಲ ಮಾಡಿದ್ದಾರೆ.
ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್ಸಿಪಿ, ಟಿಎಸ್ ಪಿ ಹಣವನ್ನು ದಯರ್ಬಳಕೆ ಮಾಡಿಕೊಂಡಿದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ 6 ಸಾವಿರ ಕೋಟಿ ರೂ. ಎಸ್ ಸಿಪಿ ಟಿಎಸ್ಪಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಗ್ಯಾರೆಂಟಿ ಗಳಿಗೆ 13000 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿರುವ ದಲಿತ ಶಾಸಕರು ಹಾಗೂ ಸಚಿವರು ಏನು ಮಾಡುತ್ತಿಧ್ದಿರಿ. ಅದನ್ನು ಕೇಳಲು ದೈರ್ಯ ಇಲ್ಲವೆ ನರ ಇಲ್ಲವೇ ಎಂದು ಪ್ರಶ್ನಿಸಿದರು. ಅಂಬೇಡ್ಕರ್ ಅವರ ಹೆಸರಿನಲ್ಲಿ ನಾವು 100 ಹಾಸ್ಟೇಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು, ಹಿಂದುಳಿದ ವರ್ಗದ ಹಾಸ್ಟೆಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೇವು. ಅವುಗಳನ್ನು ನಿಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಲಿಲ್ಲ. ನೀವು ದಲಿತರ ವಿರೋಧಿಗಳು ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





