Breaking News

ರಾಜ್ಯ ರಾಜಧಾನಿಯಲ್ಲಿ ದರೋಡೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ…

ರಾಜ್ಯ ರಾಜಧಾನಿಯಲ್ಲಿ ಸರಗಳ್ಳತನ, ಮೊಬೈಲ್ ಕಳ್ಳತನ, ದರೋಡೆ ಸೇರಿದಂತೆ 40ಕ್ಕೂ ಅಧಿಕ ಪ್ರಕರಣಗಳಲ್ಲಿ‌ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ರಫೀಕ್ ಹಾಗೂ ತೌಫೀಕ್ ಸಾಧಿಕ್ ಬಂಧಿತ ಆರೋಪಿಗಳು. ಮೇ 27ರಂದು ಬೈಕಿನಲ್ಲಿ ಬಂದ ಆರೋಪಿಗಳು ಮಲ್ಲೇಶ್ವರಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಶಾಂತಮ್ಮ ಎಂಬ 70 ವರ್ಷದ ವೃದ್ದೆಯ ಚಿನ್ನದ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು.

ಇನ್ನು ಈ ಬಗ್ಗೆ ಕುರಿತು ಮಾತನಾಡಿದ ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜು ಅವರು, ಮೇ 27ರಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಸರಗಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಲ್ಲೇಶ್ವರಂ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ, ಆರೋಪಿಗಳಿಬ್ಬರು ಸರಗಳ್ಳತನ ಪ್ರಕರಣವೊಂದರಲ್ಲಿ ಉಡುಪಿ ಜಿಲ್ಲೆಯ ಕಾಪು ಠಾಣೆಯ‌ ಪೊಲೀಸರಿಂದ ಬಂಧನವಾಗಿರುವುದನ್ನು ತಿಳಿದು ಬಾಡಿ ವಾರಂಟ್​ ಮೂಲಕ ವಶಕ್ಕೆ ಪಡೆಯಲಾಗಿತ್ತು.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *