ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಯಲ್ಲಾಪುರದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52ರ ಹುಬ್ಬಳ್ಳಿ ರಸ್ತೆಯ ಮಿಲನ್ ಹೋಟೆಲ್ ಬಳಿ ಶನಿವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಊರುಳಿ ಬಿದ್ದಿದೆ.
ಅವಘಡದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25 ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಕೂಡಲೇ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸಣ್ಣಪುಟ್ಟ ಗಾಯಾಳುಗಳಿಗೆ ಯಲ್ಲಾಪುರದ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಆಪಘಾತಗೊಂಡ ಸ್ಥಳಕ್ಕೆ ಪೊಲೀಸ್ ನಿರೀಕ್ಷಕರಾದ ರಂಗನಾಥ್, ನೀಲಮ್ಮನವರ್ ಹಾಗೂ ಪಿಎಸ್‌ಐ ರವಿ ಗುಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





