Breaking News

ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆ….

ಮೈಸೂರು:ನಾಗರಹೊಳೆ ಉದ್ಯಾನದಲ್ಲಿ ಜಿಂಕೆ ಬೇಟೆಯಾಡಿ, ಆರೋಪಿಗಳು ಜೋಳದ ಹೊಲದಲ್ಲಿ ಮಾಂಸವನ್ನು ಬಚ್ಚಿಟ್ಟಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಪರಿಕರವನ್ನು ವಶಪಡಿಸಿಕೊಂಡಿರುವ ಅರಣ್ಯ ಇಲಾಖೆ ಅಧಿಕಾರಿಗಳು ತಪ್ಪಿಸಿಕೊಂಡ ನಾಲ್ವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ, ಹಾಗು ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ನೇಗತ್ತೂರಿನ ಜೋಳದ ಹೊಲದಲ್ಲಿ, ಅಕ್ರಮವಾಗಿ ಕಾಡು ಪ್ರಾಣಿ ಮಾಂಸ ಸಂಗ್ರಹಿಸಿಟ್ಟಿದ್ದಾರೆಂದು ಖಚಿತ ಮಾಹಿತಿ ಬಂದಿತ್ತು. ಈ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿದಾಗ, ಜೋಳದ ಹೊಲದಲ್ಲಿ ರಕ್ತಸಿಕ್ತವಾಗಿದ್ದ ಮೂರು ಕತ್ತಿಗಳು, ಎರಡು ಚಾಕು, ಅನತಿ ದೂರದಲ್ಲಿ ನಾಲ್ಕು ಬಿಳಿ ಪ್ಲಾಸ್ಟಿಕ್ ಚೀಲಗಳಲ್ಲಿ ಕಾಡು ಪ್ರಾಣಿಯ ಮಾಂಸ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದ್ದು, ದಾಳಿಯ ಸುಳಿವರಿತು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *