ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇತ್ತೀಚೆಗೆ ಅಮರನಾಥ್ ಯಾತ್ರೆ ಕೈಗೊಂಡಿರುವುದು ನಿಮಗೆಲ್ಲರಿಗೂ ತಿಳಿದಿರುವ ವಿಚಾರ. ಪಟೌಡಿ ವಂಶದ ಕುಡಿ ಆಗಿರುವ ಈ ಬಹುಬೇಡಿಕೆಯ ನಟಿ ದೇವಸ್ಥಾನಗಳಿಗೆ ಭೇಟಿ ಕೊಡುವ ಮೂಲಕ ಸುದ್ದಿಯಲ್ಲಿರುತ್ತಾರೆ. ಅದರಂತೆ ಇದೀಗ ಅಮರನಾಥ್ ಯಾತ್ರೆ ಪೂರ್ಣಗೊಳಿಸಿ, ಅಭಿಮಾನಿಗಳ ಗಮನ ಸೆಳೆದಿದ್ದಾರೆ. ನಟಿ ಸಾರಾ ಅಲಿ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಮರನಾಥ್ ಯಾತ್ರೆಯ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ.
ಬಾಲಿವುಡ್ ಬೆಡಗಿ ದೇವಸ್ಥಾನಗಳಿಗೆ ಭೇಟಿ ಕೊಡೋದು ಹೊಸ ವಿಚಾರವೇನಲ್ಲ. ಇಂದು ಸೋಷಿಯಲ್ ಮೀಡಿಯಾದಲ್ಲಿ ಪ್ರಸಿದ್ಧ ಹಿಂದೂ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ಕೊಟ್ಟ ಫೋಟೋ, ವಿಡಿಯೋವನ್ನು ಶೇರ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಸಾರಾ ಅಲಿ ಖಾನ್ ಅವರ ಮೊಗದಲ್ಲಿ ಮಹಾದೇವನನ್ನು ನೋಡಿದ ಸಂತೋಷ ಸ್ಪಷ್ಟವಾಗಿ ಗೋಚರಿಸುತ್ತದೆ. ಈ ವಿಡಿಯೋ ಶೇರ್ ಮಾಡುವ ಮೂಲಕ ಸಾರಾ ಅಲಿ ಖಾನ್ ಮತ್ತೊಮ್ಮೆ ತಮ್ಮ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





