Breaking News

ಮಾಯವಾದ ಮೇಯರ. ಸುವರ್ಣ ಕಲಕುಂಟ್ಲ ಆರೋಪ ಪಾಲಿಕೆ ಸದಸ್ಯರಿಗೆ ಬೆಲೆ ಕೊಡದ ಆಯುಕ್ತರು.

ಹುಬ್ಬಳ್ಳಿ .ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯೆ ಹಾಗೂ ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಇವರು ಇಂದು ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ
ಬುಧವಾರ 26 ರಂದು ಮಹಾನಗರ ಪಾಲಿಕೆಯಲ್ಲಿ ವಿರೋಧ ಪಕ್ಷದ ನಾಯಕಿಯ ಕಾರ್ಯಾಲಯದ ಉದ್ಘಾಟನೆಯನ್ನು ಹಮ್ಮಿಕೊಂಡಿದ್ದೇವೆ.

ನೂತನ ಕಾರ್ಯಾಲಯವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಪ್ರಸಾದ ಅಬ್ಬಯ್ಯ, ವಿಧಾನ ಪರಿಷತ್ ಸದಸ್ಯರು, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಉದ್ಘಾಟನೆ ಮಾಡಲಿದ್ದಾರೆ. ಶಾಸಕರಾದ ಎನ್.ಎಚ್. ಕೋನರಡ್ಡಿ, ಮಹಾನಗರ ಪಾಲಿಕೆ ಮಹಾಪೌರರಾದ ವೀಣಾ ಬರದ್ವಾಡ, ಉಪ ಮಹಾಪೌರರಾದ ಸತೀಶ್ ಹಾನಗಲ್, ಧಾರವಾಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅನಿಲಕುಮಾರ್ ಪಾಟೀಲ್, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್‌ಹುಸೇನ್ ಹಳ್ಳೂರ್, ಶಿವಲೀಲಾ ವಿನಯ್ ಕುಲಕರ್ಣಿ, ದೀಪಾ ಗೌರಿ ಹಾಗೂ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಸಚಿವರಾದ ಸಂತೋಷ್ ಲಾಡ್ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಂಪತಿಗಳಿಗೆ ಸನ್ಮಾನದ ಜೊತೆಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಇದೇ ಸಂದರ್ಭದಲ್ಲಿ ಪಾಲಿಕೆಯ ಎಲ್ಲಾ ಸದಸ್ಯ ದಂಪತಿಗಳಿಗೆ ಆತ್ಮೀಯ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.

ನಂತರ ಮಾತನಾಡಿದ ಅವರು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಿಪಕ್ಷ ನಾಯಕಿಯಾಗಿ ಆಡಳಿತ ಪಕ್ಷದ ವೈಫಲ್ಯಗಳನ್ನು ಎತ್ತಿ ಹಿಡಿಯುವ ಜವಾಬ್ದಾರಿ ನನ್ನ ಹೆಗಲಮೇಲಿದೆ. ಪಾಲಿಕೆಯ ಮಹಾಪೌರರಾದ ವೀಣಾ ಬರದ್ವಾಡ ಅವರು ಅಧಿಕಾರ ವಹಿಸಿಕೊಂಡ ಮೇಲೆ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗದೆ ಮಾಯವಾಗಿದ್ದಾರೆ. 10 ದಿನಗಳಿಂದ ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಮಳೆಗೆ ಜನರು ಸಾಕಷ್ಟು ಕಷ್ಟನಷ್ಟಗಳಿಗೆ ಸಿಲುಕಿ ಕಂಗಾಲಾಗಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂಧಿಸದೆ ಆಡಳಿತ ಪಕ್ಷದವರು ನಿಷ್ಕಾಳಜಿ ವಹಿಸಿದ್ದಾರೆ. ಹಿಂದಿನ ಮಹಾಪೌರರು ಸನ್ಮಾನ, ಅಭಿನಂದನೆಯೊಳಗೆ ಒಂದು ವರ್ಷ ಕಾಲ ಕಳೆದರು. ಪೌರಕಾರ್ಮಿಕರಿಗೆ ಕಳಪೆ ಮಟ್ಟದ ಬೆಳಗಿನ ಉಪಹಾರ ನೀಡುತ್ತಿದ್ದರೂ ಗುತ್ತಿಗೆದಾರರ ಮೇಲೆ ಕ್ರಮಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಶಾಸಕ ಪ್ರಸಾದ ಅಬ್ಬಯ್ಯ ಅವರು ಪೌರಕಾರ್ಮಿಕರಿಗೆ ನೀಡುತ್ತಿರುವ ಉಪಹಾರ ಕಳಪೆ ಮಟ್ಟದ್ದಾಗಿರುವ ಕುರಿತು ಧ್ವನಿ ಎತ್ತಿದ್ದಾರೆ. ಪೌರಕಾರ್ಮಿಕರಿಗೆ ನೀಡುವ ಉಪಹಾರ ನಿಲ್ಲಿಸಿ, ಅವರ ಖಾತೆಗೆ ಹಣ ಹಾಕಬೇಕೆಂದು ವಿಧಾನಸೌಧದಲ್ಲಿ ಚರ್ಚೆ ಮಾಡಿದ್ದನ್ನು ನಾವು ಸ್ವಾಗತಿಸುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಮಹಾಪೌರರು ಹಾಗೂ ಪಾಲಿಕೆ ಆಯುಕ್ತರಿಗೆ ತಕ್ಷಣ ಪೌರ ಕಾರ್ಮಿಕರ ಖಾತೆಗೆ ಹಣ ಹಾಕಬೇಕೆಂದು ಒತ್ತಾಯಿಸುತ್ತೇನೆ. ತೀವ್ರ ಮಳೆಯಿಂದ ಸಾಕಷ್ಟು ತೊಂದರೆಗಳು ಆಗುತ್ತಿದ್ದು ಸಣ್ಣಪುಟ್ಟ ಕಾಮಗಾರಿ ಮಾಡಲು ಪಾಲಿಕೆಯ ಪ್ರತಿ ವಾರ್ಡ‌ಗೆ 50 ಲಕ್ಷ ರೂಪಾಯಿ ಫಂಡ್ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳೋ ಮುಖಾಂತರ ಬೇರೆ ಇಲಾಖೆಯಿಂದ ಬಂದು ಪಾಲಿಕೆಯಲ್ಲಿ ಉನ್ನತ ಹುದ್ದೆಯಲ್ಲಿ ಕುಳಿತಂತಹ ಅಧಿಕಾರಿಗಳಿಗೆ ತಕ್ಷಣ ಇಲ್ಲಿಂದ ಅವರ ಮಾತೃ ಇಲಾಖೆಗೆ ಕಳಿಸಿಕೊಡಬೇಕಾಗಿದೆ. ಪೌರಾಡಳಿತ ಸಚಿವರು ಹಾಗೂ ಮುಖ್ಯಮಂತ್ರಿಗಳಲ್ಲಿ ಈ ಕುರಿತು ವಿನಂತಿ ಮಾಡಿಕೊಳ್ಳುತ್ತೇನೆ. ಮಹಾನಗರ ಪಾಲಿಕೆ ಆಯುಕ್ತರು ಪಾಲಿಕೆ ಸದಸ್ಯರಿಗೆ ಬೆಲೆ ನೀಡದೆ ಪರುಚುಸುತ್ತಿದ್ದಾರೆ ಎಂದು ಆರಂಭಿಸಿದರು.ಈಗಾಗಲೇ ಸಚಿವರು ಅವರವರ ಮಾತೃ ಇಲಾಖೆಗೆ ಕಳುಹಿಸಿಕೊಡಲು ನಿರ್ದೇಶನ ಸಹ ನೀಡಿದ್ದಾರೆ. ಆಯುಕ್ತರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ. ಮುಂಬರುವ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಎಲ್ಲಾ ವಿಷಯಗಳಿಗೆ ಒತ್ತು ನೀಡಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು

ಪತ್ರಿಕಾಗೋಷ್ಠಿಯಲ್ಲಿ ಪಾಲಿಕೆಯ ಮಾಜಿ ಸದಸ್ಯ ದೀಪ ಗೌರಿ ಮೋಹನ್ ಹಿರೇಮನಿ ಹಾಗೂ ಸಿಂಧಿಲ್ ಕುಮಾರ್ ಅಲ್ಲದೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು

Share News

About BigTv News

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *