ಧಾರವಾಡ: ವಿದ್ಯಾಕಾಶಿ ಎಂದೇ ಹೆಸರು ಗಳಿಸಿರುವ ಧಾರವಾಡದ ಸರ್ಕಾರಿ ಕಾಲೇಜೊಂದು ಮಳೆ ಬಂದರೆ ಸಾಕು ಎಲ್ಲೆಡೆ ಸೋರುತ್ತಿದ್ದು, ವಿದ್ಯಾರ್ಥಿನಿಯರಿಗೆ ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾಲೇಜಿನ ಕಟ್ಟಡಗಳು ಸಂಪೂರ್ಣವಾಗಿ ಹಳೆಯದಾಗಿದ್ದು, ಮೇಲ್ಛಾವಣಿ ಸಹ ಬಿರುಕು ಬಿಟ್ಟಿದ್ದು, ಮಳೆ ಬಂದರೇ ಸೋರಲಾರಂಭಿಸುತ್ತದೆ.
ಧಾರವಾಡದಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇದರಿಂದ ಕಾಲೇಜಿನ ಕೊಠಡಿಗಳಿಗೆ ನೀರು ನುಗ್ಗಿದೆ. ಜತೆಗೆ ಮೇಲ್ಛಾವಣಿ ಸೋರುತ್ತಿರುವುದರಿಂದ ವಿದ್ಯಾರ್ಥಿನಿಯರು ಕೊಡೆ ಹಿಡಿದೇ ಪಾಠ ಕೇಳುವುದು ಅನಿವಾರ್ಯವಾಗಿದೆ ಇದು ನಗರದ ಆರ್ ಎನ್ ಶೆಟ್ಟಿ ಮೈದಾನದ ಮುಂಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಕಾಲೇಜ್ನ ಸ್ಥಿತಿಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





