ಬೆಂಗಳೂರು: ಆರ್ಎಸ್ಎಸ್ನ ಹಿರಿಯ ಪ್ರಚಾರಕ ಮದನ್ ದಾಸ್ ದೇವಿ (81 ವರ್ಷ ವಯಸ್ಸು) ಇಂದು ಮುಂಜಾನೆ 5 ಗಂಟೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮದನ್ ದಾಸ್ ದೇವಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇಂದು ಮಧ್ಯಾಹ್ನ 1.30ರಿಂದ 4ರ ತನಕ ಬೆಂಗಳೂರಿನ ಆರ್ಎಸ್ಎಸ್ ಕಾರ್ಯಾಲಯ ಕೇಶವ ಕೃಪಾದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಮಹಾರಾಷ್ಟ್ರದ ಪುಣೆಯಲ್ಲಿ ಅಂತ್ಯಕ್ರಿಯೆ ಜರುಗಲಿದೆ.
ಜ್ಯೇಷ್ಠ ಪ್ರಚಾರಕರಾಗಿದ್ದ ಮದನ್ ದಾಸ್ ದೇವಿ, ಈ ಹಿಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯಾಗಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸರಕಾರ್ಯವಾಹರಾಗಿ ಕಾರ್ಯನಿರ್ವಹಿಸಿದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news





