ಬೆಂಗಳೂರು: ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ ಮತ್ತು ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಬಹಳಷ್ಟು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವುದು ನನ್ನ ಭಾವನೆ. ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ, ಇಲ್ಲವಾ ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ. ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news




