Breaking News

ಮಗಳ ಮೇಲೆ ಅತ್ಯಾಚಾರ ವೆಸಗಿದ ಹೀನ ತಂದೆ…

ಚಾಮರಾಜನಗರ :- ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಶೇಷನ್ಸ್ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.ತಿಂಗಳ ಹಿಂದೆಯಷ್ಟೇ ಈ ಪ್ರಕರಣ ದಾಖಲಾಗಿತ್ತು.48 ವರ್ಷದ ತಂದೆ, ಮಗಳ ಮೇಲೆ ಅತ್ಯಾಚಾರ ಮಾಡಿದ್ದ ಮಗಳು ಗರ್ಭಿಣಿಯಾಗಿದ್ದಳು. ಪಿಎಸ್ಐ ಪಿ. ಏನ್. ಶೇಷಾದ್ರಿ ಅವರು ತನಿಖೆ ನಡೆಸಿ ಆರೋಪಿಯ ಪಟ್ಟಿ ಸಲ್ಲಿಸಿದ್ದರು.

ಆರೋಪಗಳು ಸಾಬೀತಾಗಿದ್ದರಿಂದ ಮಕ್ಕಳ ಸ್ನೇಹಿ ಮತ್ತು 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಧಿಶರಾದ ನಿಶಾರಾಣಿ ಎ. ಸಿ ಅವರು ಬಾಲಕಿ ತಂದೆಗೆ ಕೊನೆ ಉಸಿರು ಇರುವವರೆಗೂ ಜೈಲು ಶಿಕ್ಷೆ ಮತ್ತು 30/- ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.ಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಧಿಕಾರದಿಂದ 6/- ಲಕ್ಷ ಹಣವನ್ನು 30 ದಿನದ ಒಳಗೆ ಪರಿಹಾರವಾಗಿ ನೀಡಬೇಕು ಎಂದು ಆದ್ದೇಶಿಸಿದ್ದಾರೆ.ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಪಬ್ಲಿಕ್ ಪ್ರಸಿಕ್ಯೂಟರ್ ಕೆ. ಯೋಗೇಶ್ ವಾದ ಮಾಡಿದ್ದರು.

Share News

About BigTv News

Check Also

ಕಾನೂನು ರಕ್ಷಕನೇ ಭಕ್ಷಕ..! ಪೋಕ್ಸೊ ಪ್ರಕರಣದಲ್ಲಿ ಪಿಎಸ್‌ಐ ಬಂಧನ…

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೊ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ಬಂಧನ, ಭಟ್ಕಳ: ಸಾರ್ವಜನಿಕರ ರಕ್ಷಣೆ ಮಾಡಬೇಕಿದ್ದ ಪೊಲೀಸ್ ಅಧಿಕಾರಿಯೊಬ್ಬನೇ …

Leave a Reply

Your email address will not be published. Required fields are marked *