ಬೆಂಗಳೂರು:ಅಮಾವಾಸ್ಯೆ ದಿನದಂದು ಮನೆಯವರನ್ನು ದೇವಸ್ಥಾನಕ್ಕೆ ಕಳುಹಿಸಿದ ನಂತರ ಅದೇ ದಿನ ಮನೆಗೆ ತೆರಳಿ ನಗ-ನಾಣ್ಯ ದೋಚಿ ನಿಂಬೆ ಹಣ್ಣು ಇಟ್ಟು ಯಾರೋ ಮಾಟ ಮಾಡಿಸಿದ್ದಾರೆ ಎಂದು ಯಾಮಾರಿಸುತ್ತಿದ್ದ ಜ್ಯೋತಿಷಿ ವಿರುದ್ಧ ಇಲ್ಲಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಪೇಟೆಯ ಸುರೇಶ್ ಪಾಟೀಲ್ ಮೇಲೆ ಮನೆಯೊಡತಿ ಇಂದಿರಾ ಎಂಬವರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪತಿ ಮತ್ತು ಮಕ್ಕಳೊಂದಿಗೆ ಆಳ್ಳಾಲಸಂದ್ರದಲ್ಲಿ ಮಹಿಳೆ ವಾಸವಾಗಿದ್ದು, ಜೀವನಕ್ಕಾಗಿ ಮನೆಕೆಲಸ ಮಾಡುತ್ತಿದ್ದರು. ಮಗಳಿಗೆ ಕುಣಿಗಲ್ನ ಹೆಬ್ಬೂರು ನಿವಾಸಿ ಗೋವಿಂದ ಗೌಡ ಎಂಬವರೊಂದಿಗೆ ಮದುವೆ ಮಾಡಿಕೊಟ್ಟಿದ್ದರು. ಕೆಲ ತಿಂಗಳ ಬಳಿಕ ದಂಪತಿ ನಡುವೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತವರು ಮನೆಗೆ ಬರುತ್ತಿದ್ದ ಮಗಳ ಕುರಿತು ಇಂದಿರಾ ಚಿಂತಾಕ್ರಾಂತರಾಗಿದ್ದರು. ಈ ಬಗ್ಗೆ ಇಂದಿರಾ ಕೂಡ ತನ್ನ ತಾಯಿಯೊಂದಿಗೆ ದುಃಖ ತೋಡಿಕೊಂಡಿದ್ದಳು. ಸಮಸ್ಯೆಗೆ ಪರಿಹಾರವೆಂಬಂತೆ ಆಕೆಯ ತಾಯಿಯು ತನಗೆ ಜ್ಯೋತಿಷಿ ಸುರೇಶ್ ಪಾಟೀಲ್ ಪರಿಚಯವಿದ್ದು, ಅವರ ಬಳಿ ವಿಚಾರಿಸು ಎಲ್ಲವೂ ಸರಿಹೋಗಲಿದೆ ಎಂದಿದ್ದಳು.
bigtvnews | Hubli Dharwad News | Kannada News | Karnataka News Hubli News | News In Hubli | Local news





