Breaking News

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ: ರಂಜನ್ ಚೌಧರಿ.

ನವದೆಹಲಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಇಂದು ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ. ಜುಲೈ 20ರಂದು ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಪ್ರತಿಪಕ್ಷ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಣಿಪುರ ಹಿಂಸಾಚಾರ ವಿಚಾರವಾಗಿ ಪ್ರಧಾನಿ ಮೋದಿ ಹೇಳಿಕೆಗೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿವೆ. ಇದರಿಂದಾಗಿ ಉಭಯ ಸದನಗಳ ಕಲಾಪಗಳನ್ನೂ ಪದೇ ಪದೇ ಮುಂದೂಡಲಾಗುತ್ತಿದೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, “ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲಿವೆ. ಮಂಗಳವಾರ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾಗದೆ ನಮಗೆ ಬೇರೆ ದಾರಿ ಇಲ್ಲ. ಏಕೆಂದರೆ, ಮಣಿಪುರ ಕುರಿತು ಪ್ರಧಾನಿ ಜೊತೆ ವಿಸ್ತೃತ ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ. ಅವರು ಸಂಸತ್ತಿನಲ್ಲಿ ನಮ್ಮ ನಾಯಕರಾಗಿರುವುದರಿಂದ ಮಣಿಪುರ ಹಿಂಸಾಚಾರದ ಬಗ್ಗೆ ಹೇಳಿಕೆ ನೀಡಬೇಕು. ಆದರೆ, ಪ್ರತಿಪಕ್ಷಗಳ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ತಿರಸ್ಕರಿಸುತ್ತಿದ್ದಾರೆ” ಎಂದು ಹೇಳಿದರು.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *