Breaking News

ರಾಜ್ಯದಲ್ಲಿನ ಹವಾಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನ ಹವಾಮಾನ ಮತ್ತು ಮಳೆ, ಬೆಳೆ ಪರಿಸ್ಥಿತಿ ಬಗ್ಗೆ ಜಿಲ್ಲಾಡಳಿತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಡಿಯೋ ಸಂವಾದ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳ ಜೊತೆಗೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುವರು. ಬಳಿಕ ಮುಂದಿನ ಕ್ರಮಗಳ ಬಗ್ಗೆ ತಿಳಿಸಲಿದ್ದಾರೆ.

ವಿಡಿಯೋ ಸಂವಾದದಲ್ಲಿ ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿಗಳು, ಕಂದಾಯ ಸಚಿವರು ಹಾಗು ಕೃಷಿ ಸಚಿವರು ಸೇರಿದಂತೆ ಹಿರಿಯ ಸಚಿವರುಗಳು ಭಾಗಿಯಾಗಲಿದ್ದಾರೆ. ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಸ್ಥಳೀಯ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಈ ಎಲ್ಲ ಪರಿಸ್ಥಿತಿಗಳ ಬಗ್ಗೆ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಅವಲೋಕನ ಮಾಡಲಿದ್ದಾರೆ.

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗದಲ್ಲಿ ಭಾರಿ ಮಳೆ ಸಂಭವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಸೂಚನೆ ನೀಡಿದೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ಸರ್ಕಾರ ಸರ್ವಸನ್ನದ್ಧವಾಗಿದೆ. ಅತಿವೃಷ್ಟಿ ಮತ್ತು ಪ್ರವಾಹದ ಮುನ್ಸೂಚನೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ. ಪೋಷಕರು ಮತ್ತು ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಜಿಲ್ಲಾಧಿಕಾರಿಗಳ ಆದೇಶಗಳನ್ನು ಪಾಲನೆ ಮಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *