ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆ ಗಂಟಲು ನೋವು, ಕೆಮ್ಮು, ಶೀತ, ನೆಗಡಿ ಮತ್ತಿತರ ಸೋಂಕಿನ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಈ ರೋಗಗಳ ಮುಖ್ಯ ಲಕ್ಷಣವೇ ಜ್ವರ. ಮಳೆ ಬಿದ್ದಾಗ ಸೊಳ್ಳೆ ಹೆಚ್ಚಾಗುವುದರಿಂದ ಡೆಂಘೀ, ಟೈಫಾಯ್ಡ್, ವೈರಾಣು ಜ್ವರ, ಕಾಲರ ಇನ್ನಿತರ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈ ಎಲ್ಲ ಕಾಯಿಲೆಗಳ ಆರಂಭದಲ್ಲಿ ಜ್ವರವಷ್ಟೇ ಕಾಣಿಸಿಕೊಂಡರೂ, ಜೊತೆಯಲ್ಲೇ ಇತರ ನಿರ್ದಿಷ್ಟ ಗುಣಲಕ್ಷಣ ಕಾಣಿಸುತ್ತವೆ.
ಮಳೆ ಹೆಚ್ಚಾಗಿರುವ ಕಾರಣದಿಂದ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ.ಜನವರಿಯಿಂದ ಮೂವತ್ತು ಸಾವಿರಕ್ಕೂ ಹೆಚ್ಚು ಮಂದಿಯ ರಕ್ತ ಮಾದರಿ ಪರೀಕ್ಷೆ ನಡೆಸಲಾಗಿದೆ. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತಿದ್ದು, ಇದರ ಪರಿಣಾಮ ಡೆಂಘೀ ಹೆಚ್ಚುತ್ತಿದೆ. ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಕೇಂದ್ರದ ಮಾರ್ಗಸೂಚಿಗಳ ಪ್ರಕಾರ, ರಾಜ್ಯದಲ್ಲಿ ರೋಗ ವಾಹಕಗಳ ಅರಳುವಿಕೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





