ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಮಳೆಯಲ್ಲಿಯೇ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಿಶೇಷಚೇತನರಿಗೆ ಉಚಿತ ಬಸ್ ಪಾಸ್, ಪ್ರತ್ಯೇಕ ಸಚಿವಾಲಯ, ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ನಿರ್ದೇಶಕರು ಉತ್ತಮ ಕೆಲಸ ಮಾಡುತ್ತಿರುವುದರಿಂದ ಲತಕುಮಾರಿಯವರನ್ನು ನಿರ್ದೇಶಕರಾಗಿ ಮುಂದುವರೆಸಬೇಕು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರಕ್ಕೆ ವಿಶೇಷಚೇತನರು ಎಚ್ಚರಿಕೆಯನ್ನು ಸರ್ಕಾರಕ್ಕೆ ವಿಶೇಷ ಚೇತನರು ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





