ಮುಳಗುಂದ : ಸಮೀಪದ ಚಿಂಚಲಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿಯ ಎರಡನೇ ಅವಧಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಕ್ಕ ಹೇಮರಡ್ಡಿ ಬಂಗಾರಿ, ಉಪಾಧ್ಯಕ್ಷರಾಗಿ ಲಲಿತಾ ಮಾಲತೇಶ ಕುರಹಟ್ಟಿ ಅವರನ್ನು ಅವಿರೋದವಾಗಿ ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷೆ,ಉಪಾಧ್ಯಕ್ಷರಿಗೆ ಗ್ರಾಮ ಪಂಚಾಯ್ತಿ ಸದಸ್ಯರು,ಮುಖಂಡರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪೂರ,ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ, ಜಿ.ಪಂ ಮಾಜಿ ಸದಸ್ಯ ಎಚ್.ವೈ.ಪೂಜಾರ, ವಿನಯ್ ಬಂಗಾರಿ,ನಿಂಗಪ್ಪ ತೇರಿನಗಡ್ಡಿ ಯಲ್ಲಪ್ಪ ಅದರಗುಂಚಿ ಮೊದಲಾದವರು ಇದ್ದರು. ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಂ.ಮುದಗಲ್ ಚುನಾವಣೆ ಕಾರ್ಯ ನಿರ್ವಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





