Breaking News

ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರವು ಐದು ಚುನಾವಣಾ ಭರವಸೆಗಳ ಅನುಷ್ಠಾನ ಮಾಡಿರುವುದರಿಂದ ಆರ್ಥಿಕ ಅಡಚಣೆ ಉಂಟಾಗಿದೆ. ಹಾಗಾಗಿ, ಈ ವರ್ಷ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ, ಅನುದಾನ ಮತ್ತು ಅಭಿವೃದ್ಧಿ ವಿಚಾರವಾಗಿ ಕೆಲವು ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, “ಭಾರಿ ನಿರೀಕ್ಷೆಗಳನ್ನು ಹೊಂದಿರುವ ಪಕ್ಷದ ಶಾಸಕರು ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರಬೇಕು. ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ಉಚಿತ ಗ್ಯಾರಂಟಿಗಳನ್ನು ಈಡೇರಿಸಲು ಹಣಕಾಸಿನ ಅಡಚಣೆಯಾಗುವುದನ್ನು ಅರಿತುಕೊಳ್ಳಬೇಕು” ಎಂದು ತಮ್ಮ ಪಕ್ಷದ ಅಸಮಾಧಾನಿತ ಶಾಸಕರನ್ನು ಉದ್ದೇಶಿಸಿ ಹೇಳಿಕೆ ನೀಡಿದರು.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *