Breaking News

ಭಾರತವನ್ನು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವನ್ನಾಗಿ ಮಾಡುವ ಭರವಸೆ: ನರೇಂದ್ರ ಮೋದಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಮೂರನೇ ಅವಧಿಯ ಭರವಸೆಗಳ ನೀಲನಕ್ಷೆಯನ್ನು ಪ್ರಸ್ತುತಪಡಿಸುವ ಸಂದರ್ಭದಲ್ಲಿ ಪ್ರಸ್ತುತಕ್ಕಿಂತ ವೇಗದ ಬೆಳವಣಿಗೆಯೊಂದಿಗೆ ಭಾರತವನ್ನು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವನ್ನಾಗಿ ಮಾಡುವ ಭರವಸೆ ನೀಡಿದರು.ಪ್ರಧಾನಿ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರವು ಮುಂದಿನ ವರ್ಷದ ಮೇ ತಿಂಗಳಲ್ಲಿ ತನ್ನ 10 ವರ್ಷಗಳನ್ನು ಪೂರೈಸಲಿದೆ. ಅಭಿವೃದ್ಧಿ ವಿಚಾರದಲ್ಲಿ ಮೂರನೇ ಅವಧಿಗೆ ಚುನಾವಣೆ ಎದುರಿಸಲು ಎನ್​ಡಿಎ ಸಿದ್ಧತೆ ನಡೆಸುತ್ತಿದೆ. ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ನಾವು ಸಾಧಿಸಬೇಕಾಗಿದೆ ಎಂದು ಬುಧವಾರ ಅವರು ರಾಷ್ಟ್ರ ರಾಜಧಾನಿ ದೆಹಲಿಯ ಹೃದಯಭಾಗದಲ್ಲಿರುವ ವಿಶ್ವ ದರ್ಜೆಯ ಸಮಾವೇಶ ಕೇಂದ್ರ ‘ಭಾರತ ಮಂಟಪ’ವನ್ನು ಉದ್ಘಾಟಿಸಿದ ನಂತರ ಹೇಳಿದರು.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *