ತಮನ್ನಾ ಸಖತ್ತಾಗೆ ಸ್ಟೆಪ್ ಹಾಕಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ‘ಜೈಲರ್’ ಸಿನಿಮಾದ ಕಾವಾಲಾ ಹಾಡು ಇಡೀ ದೇಶದ ಡಾನ್ಸ್ ಪ್ರೇಮಿಗಳ ಮನಸ್ಸು ಗೆದಿತ್ತು. ಈ ಹಾಡಿಗೆ ಸಾಕಷ್ಟು ಮಂದಿ ರೀಲ್ಸ್ ಮಾಡಿದ್ದು, ತಮಿಳಿನಲ್ಲಿ ರಿಲೀಸ್ ಆಗಿದ್ದ ಈ ಹಾಡನ್ನು ಇದೀಗ ತೆಲುಗು ಭಾಷೆಯಲ್ಲೂ ತಯಾರು ಮಾಡಲಾಗಿತ್ತು. ಆ ಹಾಡಿನ ಬಿಡುಗಡೆ ಕಾರ್ಯಕ್ರಮವನ್ನು ಹೈದರಾಬಾದ್ ನಲ್ಲಿ ಆಯೋಜಿಸಲಾಗಿತ್ತು. ಆದರೆ ಅದಕ್ಕೀಗ ವರುಣ ಬ್ರೇಕ್ ಹಾಕಿದ್ದಾನೆ.
ಕಾವಾಲಾ ಹಾಡಿನ ಬಿಡುಗಡೆಗಾಗಿ ತಮನ್ನಾ ಸೇರಿದಂತೆ ಚಿತ್ರತಂಡದ ಹಲವು ಸದಸ್ಯರು ಹೈದರಾಬಾದ್ ಗೆ ಆಗಮಿಸಿದ್ದರು. ರಜನಿಕಾಂತ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದ ಮಾಹಿತಿ ಕೂಡ ಸಿಕ್ಕಿತ್ತು. ಆದರೆ ಹೈದರಾಬಾದ್ ನಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಕ್ಯಾನ್ಸಲ್ ಆಗಿದೆ. ಈ ಮಾಹಿತಿಯನ್ನು ಸ್ವತಃ ಚಿತ್ರತಂಡವೇ ಹಂಚಿಕೊಂಡಿದೆ.
ಕಾವಾಲಾ ತೆಲುಗು ಹಾಡನ್ನು ಕೇಳಲು ನೀವೆಲ್ಲ ಉತ್ಸುಕರಾಗಿದ್ದೀರಿ ಎನ್ನುವುದನ್ನು ನಾವು ಬಲ್ಲೆವು. ಆದರೆ, ಮಳೆಯ ಕಾರಣದಿಂದಾಗಿ ಈ ಕಾರ್ಯಕ್ರಮವನ್ನು ರದ್ದುಗೊಳಿಸುವುದು ಅನಿವಾರ್ಯವಾಗಿದೆ. ಹಾಗಂತ ನಿಮಗೆ ನಿರಾಸೆ ಮಾಡುವುದಿಲ್ಲ. ಮುಂದಿನ ದಿನಗಳಲ್ಲಿ ಖಂಡಿತಾ ಇವೆಂಟ್ ಮಾಡಿಯೇ ಸಾಂಗ್ ರಿಲೀಸ್ ಮಾಡುತ್ತೇವೆ ಎಂದಿದೆ ಸನ್ ಪಿಕ್ಚರ್ಸ್.
bigtvnews | Hubli Dharwad News | Kannada News | Karnataka News Hubli News | News In Hubli | Local news





