Breaking News

ಪತ್ನಿಯೊಂದಿಗೆ ಅಮೆರಿಕಾಗೆ ಹಾರಿದ ಮೆಗಾಸ್ಟಾರ್ ಚಿರಂಜೀವಿ

ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ ಇತ್ತೀಚೆಗಷ್ಟೇ ಪತ್ನಿಯೊಂದಿಗೆ ವಿಮಾನದಲ್ಲಿ ಪ್ರಯಾಣಿಸಿದ್ದರು. ಆ ಫೋಟೋಗಳನ್ನು ಚಿರಂಜೀವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಸಲಿ ಸುದ್ದಿ ಈಗ ಹೊರ ಬಿದ್ದಿದೆ.

ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ ಎಂದು ಹೇಳಲಾಗುತ್ತಿದೆ. ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಅದಕ್ಕಾಗಿ ಪತ್ನಿಯೊಂದಿಗೆ ಅಮೆರಿಕಾಗೆ ತೆರಳಿದ್ದರು ಎನ್ನಲಾಗುತ್ತಿದೆ.

ಭೋಲಾ ಶಂಕರ್ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಅಮೆರಿಕಾಗೆ ಹಾರಿದ್ದರು ಚಿರಂಜೀವಿ. ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ಪಡೆಯಲಾಗಿತ್ತು. ಸಣ್ಣದೊಂದು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಚಿರಂಜೀವಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರಂತೆ.

ಈವರೆಗೂ ಈ ವಿಷಯವನ್ನು ಗೌಪ್ಯವಾಗಿ ಇಡಲಾಗಿತ್ತು. ಆದರೆ, ಆಪ್ತರು ಈ ಮಾಹಿತಿಯನ್ನು ಹಂಚಿಕೊಂಡಿದ್ದರಿಂದ ಅದು ದೊಡ್ಡ ಸುದ್ದಿಯಾಗಿದೆ. ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆತಂಕ ಪಡುವಂತಹ ಅಗತ್ಯವಿಲ್ಲ ಎಂದು ಚಿರಂಜೀವಿ ಆಪ್ತರು ತಿಳಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ಅಧಿಕಾರಿಗಳ ದಾಳಿ

ಹಾಡು ಹಗಲೆ ಸಿಲಿಂಡರ್ ರಿಪೀಲ್ಲಿಂಗ್ ದಂಧೆ ನಡೆಯುತ್ತಿದೆ.ಅಡ್ಡೆಯ‌ ಮೇಲೆ ತಹಶೀಲ್ದಾರ್ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ಇಂದು ದಾಳಿ …

Leave a Reply

Your email address will not be published. Required fields are marked *