ಧಾರವಾಡ: ಸಬ್ಸಿಡಿ ದರದಲ್ಲಿ ರೈತ ಉಪಕರಣಗಳ ಸಿಂಗಲ್ ವಿಂಡೋ ಪೂರೈಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ವೀಕ್ಷಿಸಿದರು.ಧಾರವಾಡ ಎಪಿಎಂಸಿ ಮಾರುಕಟ್ಟೆಯ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರೊಂದಿಗೆ ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮವನ್ನು ವಿಡಿಯೋ ಕಾನ್ಸರೆನ್ಸ್ ಮೂಲಕ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರೈತರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಎಲ್ಲ ಯೋಜನೆಗಳ ಸದ್ದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶಾಸಕ ಮಹೇಶ ತೆಂಗಿನಕಾಯಿ, ಮಾಜಿ ಮಹಾಪೌರ ಹಾಗೂ ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಬಿಜೆಪಿ ಮುಖಂಡ ಮೋಹನ ರಾಮದುರ್ಗ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ನಿರಲಕಟ್ಟಿ, ಸಹಕಾರಿ ಪತ್ತಿನ ಸಂಘದ ಪದಾಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news




