Breaking News

ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಧಾರವಾಡ:ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಮಾಡಿದ ಪ್ರಕರಣ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಗೃಹ ಸಚಿವರು ಇದೊಂದು ಸಣ್ಣ ವಿಷಯ ಎಂದು ಉಡಾಫೆ ಹೇಳಿಕೆ ನೀಡಿದ್ದಾರೆ. ಸರ್ಕಾರ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಕುರಿತು ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರಾದ ಜಿ.ಪರಮೇಶ್ವರ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ವರ್ ಹೇಳಿಕೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share News

About bigtvnews22

Check Also

ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್..?

ಧಾರವಾಡದಲ್ಲಿ ಬೆತ್ತಲೆ ಕಾಮುಕನ ಅಟ್ಟಹಾಸ..! ಲೇಡೀಸ್ ಪಿಜಿಗಳೇ ಟಾರ್ಗೆಟ್…? 3 ತಿಂಗಳಿಂದ ಯುವತಿಯರಿಗೆ ಕಿರುಕುಳ ಆರೋಪ — ಸಿಸಿಟಿವಿಯಲ್ಲಿ ಬೆತ್ತಲೆ …

Leave a Reply

Your email address will not be published. Required fields are marked *