Breaking News

ವಿಶ್ವದ ಶೇ.70ರಷ್ಟು ಹುಲಿಗಳು ಭಾರತದಲ್ಲಿ ಇದೆ: ನರೇಂದ್ರ ಮೋದಿ

ನವದೆಹಲಿ:ಹುಲಿ ಸಂರಕ್ಷಣೆಯ ಉದ್ದೇಶದಿಂದ ಆರಂಭಿಸಲಾಗಿದ್ದ ‘ಹುಲಿ ಯೋಜನೆ’ ಇತ್ತೀಚೆಗಷ್ಟೇ 50 ವರ್ಷಗಳನ್ನು ಪೂರೈಸಿದೆ. ಈ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಇಂದು ವಿಶ್ವದ ಶೇ.70ರಷ್ಟು ಹುಲಿಗಳು ಭಾರತದಲ್ಲಿ ಕಂಡುಬರುವುದು ಸರ್ಕಾರದ ಉಪಕ್ರಮದ ಫಲಿತಾಂಶ ಎಂದು ಹೇಳಿದ್ದಾರೆ.ಇಂದು ಚೆನ್ನೈನಲ್ಲಿ ನಡೆದ ಜಿ 20 ಪರಿಸರ ಮತ್ತು ಹವಾಮಾನ ಸುಸ್ಥಿರತೆ ಸಚಿವರ ಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದ ಪ್ರಧಾನಿ, ಪ್ರಾಜೆಕ್ಟ್ ಲಯನ್ ಮತ್ತು ಪ್ರಾಜೆಕ್ಟ್ ಡಾಲ್ಫಿನ್ ಯೋಜನೆ ಪ್ರಗತಿಯಲ್ಲಿದೆ ಎಂದು ಹೇಳಿದರು.ಬೆಕ್ಕಿನ ಜಾತಿಗೆ ಸೇರಿದ 7 ಪ್ರಾಣಿಗಳ ಸಂರಕ್ಷಣೆಗಾಗಿ ಭಾರತ ಇತ್ತೀಚೆಗೆ ‘ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ ಅಲೈಯನ್ಸ್’ (ಐಬಿಸಿಎ) ಪ್ರಾರಂಭಿಸಿದೆ. ಇದು ಪ್ರಾಜೆಕ್ಟ್ ಟೈಗರ್​ನ ಪ್ರವರ್ತಕ ಸಂರಕ್ಷಣಾ ಉಪಕ್ರಮ ಆಧರಿಸಿದೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *