Breaking News

ಸರ್ಕಾರ ಕೆಡವಲು ಸಿಂಗಪುರ್​ನಲ್ಲಿ ಕುಳಿತು ತಂತ್ರ ಹೆಣೆಯಲಾಗುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಸರ್ಕಾರ ಕೆಡವಲು ಸಿಂಗಪುರ್​ನಲ್ಲಿ ಕುಳಿತು ತಂತ್ರ ಹೆಣೆಯಲಾಗುತ್ತಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಫೋಟೋಗಳ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ. ಕುಮಾರಸ್ವಾಮಿ ಅವರು ತಮ್ಮ ಕುಟುಂಬ ಸಮೇತರಾಗಿ ಯೂರೋಪ್ ಪ್ರವಾಸದಲ್ಲಿರುವ ಫೋಟೋಗಳನ್ನು ಜೆಡಿಎಸ್‌ ನಾಯಕರು ಬಿಡುಗಡೆ ಮಾಡಿದ್ದಾರೆ. ಪ್ರಸ್ತುತ ಯುರೋಪ್‌ನ ಫಿನ್‌ಲ್ಯಾಂಡ್​​ನಲ್ಲಿ ಹೆಚ್​ಡಿಕೆ ಹಾಗೂ ಕುಟುಂಬ ಸದಸ್ಯರು ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ.

ವಿಧಾನಸಭಾ ಅಧಿವೇಶನ ಮುಗಿದ ಬೆನ್ನಲ್ಲೇ ಹೆಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಸಹೋದರ ಬಾಲಕೃಷ್ಣ ಗೌಡ, ಸಹೋದರಿ ಸೇರಿದಂತೆ ಅವರ ಕುಟುಂಬದ 24 ಸದಸ್ಯರು ವಿದೇಶ ಪ್ರವಾಸಕ್ಕೆ ತೆರಳಿದ್ದರು. ಮತ್ತೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಿಂಗಾಪುರ್​ನಲ್ಲಿ ಕುಳಿತು ಕಾಂಗ್ರೆಸ್ ಸರ್ಕಾರ ಬೀಳಿಸುವ ಕಾರ್ಯ ತಂತ್ರ ಮಾಡುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂಬ ಹೇಳಿಕೆ ನೀಡಿದ್ದರು.ಕುಟುಂಬದ ಜೊತೆ ಯುರೋಪ್​ ಪ್ರವಾಸದಲ್ಲಿ ಹೆಚ್​ಡಿಕೆ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿತ್ತು. ಸಿಎಂ ಸಿದ್ದರಾಮಯ್ಯ ಸರ್ಕಾರದ ಪತನಕ್ಕೆ ವಿದೇಶದಲ್ಲಿ ತಂತ್ರಗಾರಿಕೆ ಆಗುತ್ತಿದೆಯೇ? ಎಂಬ ಚರ್ಚೆಗಳು ನಡೆದಿದ್ದವು. ಡಿ.ಕೆ.ಶಿವಕುಮಾರ್ ಅವರು ಸಿಂಗಾಪುರ್ ಬಗ್ಗೆ ನೀಡಿದ ಹೇಳಿಕೆಯ ನಾಲ್ಕು ದಿನಗಳ ನಂತರ ವಿದೇಶಿ ರಾಜಕೀಯಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *