Breaking News

ಸತತ 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಸಯಾಮಿ ಮಕ್ಕಳನ್ನು ಯಶಸ್ವಿಯಾಗಿ ಬೇರ್ಪಡಿಸಿದ ವೈದ್ಯರು…

ನವದೆಹಲಿ :ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್​- AIIMS) ತಜ್ಞ ವೈದ್ಯರು ಸತತ 9 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಒಂದು ವರ್ಷದ ಸಯಾಮಿ ಮಕ್ಕಳನ್ನು ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ಉತ್ತರ ಪ್ರದೇಶದ ಬರೇಲಿ ಮೂಲದ ದೀಪಿಕಾ ಮತ್ತು ಅಂಕುರ್ ಗುಪ್ತಾ ದಂಪತಿಗೆ ರಿದ್ಧಿ ಮತ್ತು ಸಿದ್ಧಿ ಎಂಬ ಅವಳಿ ಹೆಣ್ಣು ಮಕ್ಕಳು ಜನಿಸಿದ್ದರು. ಈ ಮಕ್ಕಳ ಎದೆ ಮತ್ತು ಹೊಟ್ಟೆ ಭಾಗಗಳು ಕೂಡಿಕೊಂಡಿದ್ದವು.ರಿದ್ಧಿ ಮತ್ತು ಸಿದ್ಧಿ ಸುಮಾರು 1 ವರ್ಷದ ಅವಳಿ ಸಹೋದರಿಯರು. ಹುಟ್ಟಿನಿಂದಲೇ ಪರಸ್ಪರ ಅಂಟಿಕೊಂಡಿದ್ದರು. ದೇಹದ ಹಲವು ಭಾಗಗಳು ಒಂದಕ್ಕೊಂದು ಸಂಪರ್ಕ ಹೊಂದಿದ್ದವು.

“ಬರೇಲಿಯಲ್ಲಿ ದೀಪಿಕಾ ಗುಪ್ತಾ ಅವರ ಗರ್ಭಧಾರಣೆಯ ನಾಲ್ಕನೇ ತಿಂಗಳಲ್ಲಿ ಥೋರಾಕೊ-ಆಂಫಾಲೋಪಾಗಸ್ ಸಂಯೋಜಿತ ಅವಳಿಗಳೆಂದು ಜನನದ ಮೊದಲೇ ಗುರುತಿಸಲಾಗಿತ್ತು. ಕಳೆದ ವರ್ಷ ಜುಲೈ 7ರಂದು ಜನಿಸಿದ ಮಕ್ಕಳು ಐದು ತಿಂಗಳ ಕಾಲ ಐಸಿಯುನಲ್ಲಿದ್ದರು. ಸುದೀರ್ಘ ಶಸ್ತ್ರಚಿಕಿತ್ಸೆಯ ನಂತರ ಜೂನ್ 8ರಂದು ಮಕ್ಕಳನ್ನು ಬೇರ್ಪಡಿಸಲಾಯಿತು. ಅವಳಿಗಳು ತಮ್ಮ ಮೊದಲ ಹುಟ್ಟುಹಬ್ಬವನ್ನು ಆಸ್ಪತ್ರೆಯಲ್ಲೇ ಆಚರಿಸಿಕೊಂಡರು” ಎಂದು ಪೀಡಿಯಾಟ್ರಿಕ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಮಿನು ಬಾಜ್ಪೈ ಹೇಳಿದ್ದಾರೆ.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *