Breaking News

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ 30 ಮಂದಿ ಪ್ರಯಾಣಿಕರು ಮೃತ..

ಮನಿಲಾ (ಫಿಲಿಪ್ಪೀನ್ಸ್‌):ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ 30 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಫಿಲಿಪ್ಪೀನ್ಸ್‌ ರಾಜಧಾನಿ ಸಮೀಪದ ಸರೋವರದಲ್ಲಿ ಗುರುವಾರ ನಡೆದಿದೆ. ಘಟನೆಯಿಂದ 40 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಫಿಲಿಪ್ಪೀನ್ಸ್‌ ಕರಾವಳಿ ರಕ್ಷಣಾ ಪಡೆ ತಿಳಿಸಿದೆ.ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಬಲವಾದ ಗಾಳಿಯಿಂದಾಗಿ ಯಾಂತ್ರೀಕೃತ ದೋಣಿ ಒಂದು ಕಡೆಗೆ ವಾಲಿತ್ತು. ಇದರಿಂದ ಭಯಭೀತರಾದ ಪ್ರಯಾಣಿಕರು ದೋಣಿಯ ಒಂದೇ ಕಡೆ ಗುಂಪುಗೂಡಿದರು. ಇದರ ಪರಿಣಾಮ ದೋಣಿ ಸಮತೋಲನ ಕಳೆದುಕೊಂಡು ನೀರಿನಲ್ಲಿ ಮುಳುಗಿದೆ ಎಂದು ಹೇಳಲಾಗಿದೆ.ಘಟನಾ ಪ್ರದೇಶದಲ್ಲಿ ಫಿಲಿಪ್ಪೀನ್ಸ್‌ ಕರಾವಳಿ ರಕ್ಷಣಾ ಪಡೆಯಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ದುರಂತದ ಸಮಯದಲ್ಲಿ ದೋಣಿಯಲ್ಲಿ ಎಷ್ಟು ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂಬುದನ್ನು ದೃಢಪಡಿಸಲಾಗಿಲ್ಲ. ಅಪಘಾತದ ಸ್ಥಳವು ರಾಜಧಾನಿ ಮನಿಲಾದಿಂದ ಕೇವಲ ಎರಡು ಗಂಟೆಗಳ ಪ್ರಯಾಣದ ದೂರದಲ್ಲಿದೆ.

Share News

About BigTv News

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *