Breaking News

3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರಿ ಬೆಂಕಿ ಅವಘಡ…

ನೆದರ್ಲ್ಯಾಂಡ್ಸ್‌ ​:ಇಲ್ಲಿನ ಕರಾವಳಿಯಲ್ಲಿ ಸುಮಾರು 3,000 ಕಾರುಗಳನ್ನು ಸಾಗಿಸುತ್ತಿದ್ದ ಸರಕು ಸಾಗಣೆ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಡಚ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ಹೇಳಿದ್ದಾರೆ.3000 ಕಾರುಗಳನ್ನು ಸಾಗಿಸುತ್ತಿದ್ದ ಕಾರ್ಗೊ ಹಡಗುಜರ್ಮನಿಯಿಂದ ಸಿಂಗಾಪುರಕ್ಕೆ ಹೊರಟಿದ್ದ ಫ್ರೀಮ್ಯಾಂಟಲ್ ಹೈವೇ ಎಂಬ ಹೆಸರಿನ ಹಡಗು ಮಂಗಳವಾರ ಮಧ್ಯರಾತ್ರಿ ಅಮೆಲ್ಯಾಂಡ್‌ನ ಡಚ್ ದ್ವೀಪದ ಬಳಿ ಬೆಂಕಿ ಅನಾಹುತಕ್ಕೆ ತುತ್ತಾಗಿತ್ತು. ಈ ಸಂದರ್ಭದಲ್ಲಿ 23 ಸಿಬ್ಬಂದಿ ತಮ್ಮ ಪ್ರಾಣ ಉಳಿಸಿಕೊಳ್ಳಲು ಸಮುದ್ರಕ್ಕೆ ಹಾರಿದ್ದಾರೆ.

ಓರ್ವ ಭಾರತೀಯ ಸಿಬ್ಬಂದಿ ಸಾವಿಗೀಡಾಗಿರುವ ಮಾಹಿತಿಯನ್ನು ನೆದರ್‌ಲ್ಯಾಂಡ್ಸ್‌ನಲ್ಲಿರುವ ಭಾರತದ ರಾಯಭಾರ ಕಚೇರಿ (ಇಂಡಿಯಾ ಇನ್ ನೆದರ್‌ಲ್ಯಾಂಡ್ಸ್) ಈ ವಿಷಯವನ್ನು ದೃಢಪಡಿಸಿದೆ. ಮೃತ ವ್ಯಕ್ತಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಶೀಘ್ರವೇ ಮೃತದೇಹವನ್ನು ಭಾರತಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಚೇರಿ ತಿಳಿಸಿದೆ. ಗಾಯಾಳು ಸಿಬ್ಬಂದಿಯೊಂದಿಗೂ ಸಂಪರ್ಕದಲ್ಲಿದ್ದೇವೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ. ಡಚ್ ಅಧಿಕಾರಿಗಳು ಮತ್ತು ಶಿಪ್ಪಿಂಗ್ ಕಂಪನಿಯೊಂದಿಗೆ ಮಾತನಾಡಿದ್ದು ಮುಂದಿನ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತೀಯ ರಾಯಭಾರ ಕಚೇರಿ ಹೇಳಿದೆ.ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ.

Share News

About BigTv News

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *