Breaking News

ನಿರಂತರ ಮಳೆ ಹಿನ್ನೆಲೆಯಲ್ಲಿ 8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ..

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ. ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.

8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ ತಾಲೂಕಿನಲ್ಲಿ 4, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 11, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 7, ಕಲಘಟಗಿ ತಾಲೂಕಿನಲ್ಲಿ 45, ಕುಂದಗೋಳ ತಾಲೂಕಿನಲ್ಲಿ 26, ನವಲಗುಂದ ತಾಲೂಕಿನಲ್ಲಿ 10 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 8 ಮನೆಗಳೂ ಸೇರಿದಂತೆ ಜಿಲ್ಲೆಯ 8 ತಾಲೂಕುಗಳಲ್ಲಿ ಸುಮಾರು 198 ಮನೆಗಳು ತೊಂದರೆಗೀಡಾಗಿವೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *