Breaking News

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ…

ಬೀದರ್​: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ ಪತ್ನಿಯನ್ನೇ ಥಳಿಸಿ ಗಲಾಟೆ ಮಾಡುತ್ತಿದ್ದನಂತೆ. ಘಟನೆಯ ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಡೆಸಿದ ಆಪ್ತ ಸಮಾಲೋಚನೆಯಲ್ಲಿ ಬಾಲಕಿ ಸಂಗತಿಯನ್ನು ತೆರೆದಿಟ್ಟಿದ್ದಾಳೆ. ನಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *