ಹುಬ್ಬಳ್ಳಿ : ಶಕ್ತಿ ಯೋಜನೆಯಿಂದ ಆಟೋ ಚಾಲಕರಿಗೆ ಅನ್ಯಾಯವಾಗುತ್ತಿದೆ. ಸರಿಯಾದ ದುಡಿಮೆ ಇಲ್ಲದೆ ಪರದಾಡುತ್ತಿರುವ ಹಿನ್ನಲೆಯಲ್ಲಿ, ಇಂದು ಹುಬ್ಬಳ್ಳಿ ಧಾರವಾಡ ಅವಳಿ ನಗರದ ಆಟೋ ಚಾಲಕರ ಸಂಘ ಸಂಪೂರ್ಣ ಆಟೋ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್‌ನಲ್ಲಿ ಪ್ರತಿಭಟನೆ ಮಾಡಿದ ಆಟೋ ಚಾಲಕರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು. ಆಟೋ ಚಾಲಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.
ಇನ್ನು, ಆಟೋ ಚಾಲಕರ ಪ್ರತಿಭಟನೆ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಬಂದು ಮನವಿ ಸ್ವೀಕರಿಸಿದರು. ಮುಷ್ಕರ ಹಿಂಪಡೆಯುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿಕೊಂಡ ಸಂತೋಷ ಲಾಡ್, ಆಟೋ ಚಾಲಕರ ಬೇಡಿಕೆಗಳ ಕುರಿತು ಸಿಎಂ ಹಾಗೂ ಸಾರಿಗೆ ಸಚಿವರ ಜೊತೆಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ನೇರವಾಗಿ ಸಿಎಂ ಹಾಗೂ ಸಾರಿಗೆ ಸಚಿವರ ಗಮನಕ್ಕೆ ತರುತ್ತೇನೆಂದು ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





