Breaking News

ನರೇಂದ್ರ ಮೋದಿ ಅವರಿಗೆ ಲೋಕಮಾನ್ಯ ಬಾಲಗಂಗಾಧರ್​ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ….

ಪುಣೆ(ಮಹಾರಾಷ್ಟ್ರ): ಮಹಾರಾಷ್ಟ್ರ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು ಪುಣೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಮಾನ್ಯ ಬಾಲಗಂಗಾಧರ್​ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಕೂಡ ವೇದಿಕೆ ಹಂಚಿಕೊಂಡು ಕುತೂಹಲ ಮೂಡಿಸಿದರು.

ಈ ಪ್ರಶಸ್ತಿ ಪಡೆದ 41ನೇ ವ್ಯಕ್ತಿ ಮೋದಿ ಅವರಾಗಿದ್ದಾರೆ. ಮಾಜಿ ರಾಷ್ಟ್ರಪತಿಗಳಾದ ಡಾ. ಶಂಕರ್ ದಯಾಳ್ ಶರ್ಮಾ, ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ ಮತ್ತು ಡಾ. ಮನಮೋಹನ್ ಸಿಂಗ್, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಡಾ. ಇ.ಶ್ರೀಧರನ್ ಸೇರಿದಂತೆ ಹಲವರಿಗೆ ಈ ಗೌರವ ಸಂದಿದೆ.

ಸ್ವಾತಂತ್ರ್ಯ ಹೋರಾಟಗಾರ ಲೋಕಮಾನ್ಯ ತಿಲಕ್ ಅವರ ಪರಂಪರೆಯನ್ನು ಮುಮದುವರೆಸಲು ತಿಲಕ್ ಸ್ಮಾರಕ ಮಂದಿರ ಟ್ರಸ್ಟ್‌ನಿಂದ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು 1983 ರಿಂದ ನೀಡಲಾಗುತ್ತಿದೆ. ರಾಷ್ಟ್ರದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಶ್ರಮಿಸಿದ ಜನರಿಗೆ ಈ ಪ್ರಶಸ್ತಿಯನ್ನು ಪ್ರತಿ ವರ್ಷ ಲೋಕಮಾನ್ಯ ತಿಲಕರ ಪುಣ್ಯತಿಥಿಯಾದ ಆಗಸ್ಟ್ 1 ರಂದು ನೀಡಲಾಗುತ್ತದೆ.

Share News

About BigTv News

Check Also

ಬೀಳ್ಕೊಡುಗೆ ಸಮಾರಂಭದಲ್ಲಿ ಭಾಷಣ ಮಾಡುತ್ತಲೇ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು!.

ವರ್ಷಾ ಮೃತ ವಿದ್ಯಾರ್ಥಿನಿ. ಈಕೆ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭದಂದು ಸಂತೋಷದಿಂದ ಭಾಷಣ ಮಾಡುತ್ತಿದ್ದಳು.ಭಾಷಣ ಮಾಡುತ್ತಿದ್ದಾಗ …

Leave a Reply

Your email address will not be published. Required fields are marked *