Breaking News

ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸೆಮನ್ಸ್ ಜಾರಿ ಮಾಡಿದೆ….

ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್ ಪಾಟೀಲ್​​ಗೂ ಸಮನ್ಸ್ ಜಾರಿ ಮಾಡಲಾಗಿದೆ.

ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. ರೇವಣ್ಣ ಅವರು ಚುನಾವಣೆ ಅಕ್ರಮದಿಂದ ಶಾಸಕರಾಗಿದ್ದು, ಅವರನ್ನು ಅನರ್ಹಗೊಳಿಸಿ ಮೂರನೇ ಸ್ಥಾನದಲ್ಲಿರುವ ತನ್ನನ್ನು ಶಾಸಕ ಎಂದು ಘೋಷಿಸುವಂತೆ ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.

ಇದೇ ಕ್ಷೇತ್ರದಲ್ಲಿ ಎರಡನೇ ಸ್ಥಾನದಲ್ಲಿ ಇರುವ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೂ ಆರೋಪಿಸಲಾಗಿದೆ. ಅಲ್ಲದೇ, ಮತದಾನಕ್ಕೂ ಒಂದು ದಿನ ಮುಂಚೆ ಪ್ರತಿವಾದಿ ಎಚ್.ಡಿ.ರೇವಣ್ಣ ಅವರ ಸಹಚರರಿಂದ ಕ್ಷೇತ್ರದ ಅಣ್ಣೇನಹಳ್ಳಿ, ದಂಡಿಗನಹಳ್ಳಿ ಪ್ರತಿ ಮನೆಗೆ 2 ಜೀವಂತ ಕೋಳಿಗಳು ಮತ್ತು 3 ಸಾವಿರ ರು.ಗಳನ್ನ ಹಂಚಿಕೆ ಮಾಡಿದ್ದಾರೆ. ಮತದಾರರು ಇದನ್ನು ಸ್ವೀಕರಿಸಿದ ಬಳಿಕ ಮತಹಾಕುವುದಾಗಿ ಭರವಸೆ ನಿಡಿದ್ದರು. ಈ ಬೆಳವಣಿಗೆ ಪ್ರಜಾಪ್ರತಿನಿಧಿ ಕಾಯಿದೆ 1951ರ ಸೆಕ್ಷನ್ 123ಕ್ಕೆ ವಿರುದ್ಧವಾಗಿದ್ದು, ಭ್ರಷ್ಟಾಚಾರ ನಡೆಸಿರುವುದು ತಿಳಿದು ಬರಲಿದೆ.

ಈ ಬೆಳವಣಿಗೆಯನ್ನು ಅರ್ಜಿದಾರರು ಪ್ರಶ್ನಿಸಿದ ಸಂದರ್ಭದಲ್ಲಿ ರೇವಣ್ಣ ಅವರ ಪರ ಕಾರ್ಯನಿರ್ವಹಿಸುತ್ತಿದ್ದು, ಬೆಂಬಲಿಗರು ಕಾರನ್ನು ತಡೆದು ಗಾಜನ್ನು ಪುಡಿ ಪುಡಿ ಮಾಡಿದ್ದರು. ಅಷ್ಟೇ ಅಲ್ಲದೆ, ದೊಣ್ಣೆ ಕಲ್ಲುಗಳಿಂದ ಹೊಡೆದಿದ್ದರು. ಇದೇ ವೇಳೆ, ಅರ್ಜಿದಾರರ ಗನ್​ಮ್ಯಾನ್ ಅಂಗ ರಕ್ಷಕನಿಗೆ ಹಲ್ಲೆ ನಡೆಸಲಾಗಿತ್ತು. ಘಟನೆ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಲ್ಲದೆ, ರೇವಣ್ಣ ಅವರು ಬ್ಯಾಂಕ್‌ನ ಖಾತೆಯಲ್ಲಿರುವ ಮೊತ್ತವನ್ನೂ ಸರಿಯಾದ ರೀತಿಯಲ್ಲಿ ಸೂಕ್ತ ರೀತಿಯಲ್ಲಿ ವಿವರಿಸಿಲ್ಲ. ಅಭ್ಯರ್ಥಿಯ ಮಾಹಿತಿ ಒದಗಿಸದೇ ಇರುವುದು ಕಾನೂನು ಬಾಹಿರವಾಗಲಿದೆ. ಹೀಗಾಗಿ ಚುನಾವಣಾಧಿಕಾರಿಗಳುಗಳು ನಾಮಪತ್ರ ತಿರಸ್ಕರಿಸಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

Share News

About bigtvnews22

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *