ಕಾರವಾರ: ಸ್ವಿಚ್ಡ್ ಬೋರ್ಡ್ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್ಗೆ ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಸಿದ್ದರದಲ್ಲಿ ಇಂದು ನಡೆದಿದೆ. ಸಿದ್ದರದ ಸಂತೋಷ ಕಲ್ಗುಟಕರ್, ಸಂಜನಾ ಕಲ್ಗುಟಕರ್ ದಂಪತಿಯ ಏಂಟು ತಿಂಗಳ ಹೆಣ್ಣು ಮಗು ಸಾನಿಧ್ಯ ಕಲ್ಗುಟಕರ್ ಮೃತಪಟ್ಟಿದೆ.
ಇಂದು ಬೆಳಗ್ಗೆ ಮನೆಯಲ್ಲಿ ಸ್ವಿಚ್ ಬೋರ್ಡ್ಗೆ ಹಾಕಿದ್ದ ಮೊಬೈಲ್ ಚಾರ್ಜರ್ ಸ್ವಿಚ್ ಆಫ್ ಮಾಡಿರಲಿಲ್ಲ. ಆದರೆ, ಇದೇ ಸಮಯದಲ್ಲಿ ಮಗು ಆನ್ ಇದ್ದ ಚಾರ್ಜರ್ ವಯರ್ಗೆ ಬಾಯಿ ಹಾಕಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ಮಗು ಸಾವನ್ನಪ್ಪಿದೆ. ತಕ್ಷಣ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತಾದರೂ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





