Breaking News

ಎವರ್ ಗ್ರೀನ್ ಹೀರೊ ಸಿನಿ ಬದುಕಿಗೆ 50 ವರ್ಷ ಪೂರ್ಣ….

ಅನಂತ್ ನಾಗ್​​…..ಕನ್ನಡ ಚಿತ್ರರಂಗದ ಮೇರು ನಟ. ಅದ್ಭುತ ಅಭಿನಯದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ತಾರೆ. ಪ್ರತಿಭಾನ್ವಿತ ನಟ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 50 ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆ ಸಿನಿ ತಾರೆಯರೂ ಸೇರಿದಂತೆ ಅಭಿಮಾನಿಗಳು ನಟನಿಗೆ ಅಭಿನಂದನೆ ತಿಳಿಸಿದ್ದಾರೆ.

ಎವರ್ ಗ್ರೀನ್ ಹೀರೋ ಅನಂತ್​ ನಾಗ್
280ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ…1973ರಲ್ಲಿ ತೆರೆಕಂಡ ‘ಸಂಕಲ್ಪ’ ಅನಂತ್​ ನಾಗ್​​ ಬಣ್ಣ ಹಚ್ಚಿದ ಚೊಚ್ಚಲ ಚಿತ್ರ. 1973ರಲ್ಲಿ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟ ನಟ ಕನ್ನಡ ಮಾತ್ರವಲ್ಲದೇ, ಹಿಂದಿ, ತಮಿಳು, ತೆಲುಗು ಭಾಷೆಯ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈವರೆಗೆ ಅಂದ್ರೆ 50 ವರ್ಷಗಳ ಸಿನಿ ಬದುಕಿನಲ್ಲಿ ಸರಿ ಸುಮಾರು 280ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನೆ ಮಾಡಿದ್ದಾರೆ.

ಅನಂತ್​ ನಾಗ್ ಅಪರೂಪದ ಫೊಟೋ…
ಸಿನಿ ಪಯಣಕ್ಕೆ 50ರ ಸಂಭ್ರಮ…ಎವರ್​​ ಗ್ರೀನ್ ಹೀರೋ ಎಂದೇ ಕರೆಸಿಕೊಳ್ಳುವ ಹಿರಿಯ ನಟ ಅನಂತ್​ ನಾಗ್​​ ಅವರ ಸಿನಿ ಪಯಣಕ್ಕೆ 50ರ ಸಂಭ್ರಮ. ಸ್ಯಾಂಡಲ್​ವುಡ್​ನಲ್ಲಿ ಅವರ ಸೇವೆ ಅಪಾರ. ಈ ಹಿರಿವಯಸ್ಸಿನಲ್ಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಸದ್ಯ ನಟನಿಗೆ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಡಿವೈನ್​ ಸ್ಟಾರ್ ರಿಷಬ್​ ಶೆಟ್ಟಿ, ಕರುನಾಡ ಚಕ್ರವರ್ತಿ ಶಿವ ರಾಜ್​ಕುಮಾರ್​ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಅನಂತ್​ ನಾಗ್​ ಕುರಿತ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ.

ಅನಂತ್​ ನಾಗ್ ಅಪರೂಪದ ಫೊಟೋ…
ಸಾಮಾಜಿಕ ಜಾಲತಾಣದಲ್ಲಿ ಅನಂತ್​ ನಾಗ್​ ಕುರಿತ ವಿಡಿಯೋವೊಂದನ್ನು ಹಂಚಿಕೊಂಡಿರುವ ಕಾಂತಾರ ಸಾರಥಿ ರಿಷಬ್​ ಶೆಟ್ಟಿ, ”ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ” ಎಂದು ಬರೆದುಕೊಂಡಿದ್ದಾರೆ.

ಎವರ್ ಗ್ರೀನ್ ಹೀರೋ ಅನಂತ್​ ನಾಗ್
ಇನ್ನೂ ಕರುನಾಡ ಚಕ್ರವರ್ತಿ ಶಿವ ರಾಜ್​ಕುಮಾರ್​ ಕೂಡ ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ. ಅನಂತ್​ ನಾಗ್​ ಮತ್ತು ಶಿವಣ್ಣ ಇರುವ ಭಾವಚಿತ್ರದಲ್ಲಿ ”ಚಿತ್ರರಂಗದಲ್ಲಿ 50 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್​​ ಸರ್, ನಿಮಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ಮತ್ತು ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ” ಎಂದು ಬರೆದುಕೊಂಡಿದ್ದಾರೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *