ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ಗೆ ಆಗಮಿಸಿ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಯಲ್ಲಿರುವ ಸಿಎಂ ರಾಜ್ಯಕ್ಕೆ ಬರಬೇಕಿರುವ ಅನುದಾನ ಬಗ್ಗೆ ಚರ್ಚಿಸಲು ಮೋದಿ ಅವರ ಭೇಟಿಗೆ ಅವಕಾಶ ಕೋರಿದ್ದರು. ಹೀಗಾಗಿ ಇಂದು ಬೆಳಗ್ಗೆ ಮೋದಿ ಅವರ ಭೇಟಿಗೆ ಸಮಯ ಸಿಕ್ಕಿದ್ದು, ಸಂಸತ್ತಿನಲ್ಲಿನ ಪ್ರಧಾನಿ ಕಚೇರಿಯಲ್ಲಿ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚಿಸಿದರು.
ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ಅನುದಾನ ಬಿಡುಗಡೆ ಬಗ್ಗೆ ಮಾತುಕತೆ
ಅನುದಾನ ಬಿಡುಗಡೆಗೆ ಮನವಿ:ವಿವಿಧ ಯೋಜನೆಗಳಡಿ ಕರ್ನಾಟಕಕ್ಕೆ ಕೇಂದ್ರದಿಂದ ಬರಬೇಕಾಗಿರುವ ಬಾಕಿ ಅನುದಾನವನ್ನು ಬಿಡುಗಡೆ ಮಾಡಲು ಪ್ರಧಾನಿ ಬಳಿ ಸಿಎಂ ಸಿದ್ದರಾಮಯ್ಯ ಚರ್ಚಿಸಿದರು ಎಂದು ತಿಳಿದು ಬಂದಿದೆ. ಎರಡನೇ ಅವಧಿಗೆ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





