ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಮಕ್ಕಳನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ವಿದ್ರಾವಕ ಘಟನೆ ಕಾಡುಗೋಡಿಯ ಠಾಣಾ ವ್ಯಾಪ್ತಿ ಶೀಗೇಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್’ ಮೆಂಟ್’ನಲ್ಲಿ ನಡೆದಿದೆ.
ಆಂಧ್ರ ಮೂಲದ ದಂಪತಿಗಳಾದ ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(29) ಹಾಗೂ ಇಬ್ಬರು ಹೆಣ್ಣುಮಕ್ಕಳಾದ 1 ವರ್ಷದ ಮಗು, ಮೂರು ವರ್ಷದ ಮಗುವನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ನಿನ್ನೆ ರಾತ್ರಿ ನಡೆದಿದ್ದರು ತಡವಾಗಿ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೂ ಮುನ್ನ ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ವೀರಾರ್ಜುನ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಬಳಿಕ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news




